ಇನ್ನು, ಮೃತ ನಂದಿತಾ ಮನೆಗೆ - TopicsExpress



          

ಇನ್ನು, ಮೃತ ನಂದಿತಾ ಮನೆಗೆ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕರಾದ ಆರಗ ಜ್ಞಾನೇಂದ್ರ ಹಾಗೂ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿದ್ರು. ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದ್ರು. ಈ ವೇಳೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ರಾಜ್ಯ ಸರ್ಕಾರ ಪ್ರಕರಣ ಮುಚ್ಚಿಹಾಕಲು ಯತ್ನಿಸುತ್ತಿದೆ. ಘಟನೆ ನಡೆದು 6 ದಿನಗಳಾದ್ರೂ ಆರೋಪಿಗಳನ್ನು ಬಂಧಿಸಿಲ್ಲ. ಸಿಐಡಿ ತನಿಖೆ ಮೇಲೆ ಯಾವುದೇ ವಿಶ್ವಾಸವಿಲ್ಲ . ಬಾಲಕಿ ನಂದಿತಾ ಹತ್ಯೆ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಲಿ . ಈ ಕುರಿತಂತೆ ಕೇಂದ್ರ ಮಹಿಳಾ ಆಯೋಗಕ್ಕೆ ಪತ್ರ ಬರೆಯುವುದಾಗಿ ಹೇಳಿದ್ರು. -------- ಇದೇ ವೇಳೆ ಸಂಸದೆ ಶೋಭಾ ಕರಂದ್ಲಾಜೆ, ನಂದಿತಾ ಕೊಲೆ ಕೇಸ್ ಪ್ರಕರಣದಲ್ಲಿ ಸ್ಥಳೀಯ ಪೊಲೀಸರ ಹಸ್ತಕ್ಷೇಪ ಇದೆ ಎಂದು ಆರೋಪಿಸಿದ್ರು. ಆರಂಭದಿಂದಲೂ ತೀರ್ಥಹಳ್ಳಿ ಪೊಲೀಸ್ ಠಾಣೆಯ ಪೇದೆ ಅನಿಲ್ ತುಂಬಾ ಉತ್ಸಾಹದಿಂದ ಕೆಲಸ ಮಾಡಿದ್ದಾರೆ. ಡೆತ್ ನೋಟ್ ಪ್ರತಿ ಮಾಹಿತಿ ಪೇದೆಗೆ ಹೇಗೆ ಲಭಿಸಿತು ಎಂಬ ಬಗ್ಗೆ ಸಂಶಯ ವ್ಯಕ್ತವಾಗುತ್ತಿದೆ. ಇಂಥ ಘಟನೆ ಸಿಎಂ ಮನೆಯಲ್ಲಿ ನಡೆದಿದ್ರೆ ಸಹಿಸುಕೊಳ್ಳುತ್ತಿದ್ರಾ ಎಂದು ಪ್ರಶ್ನಿಸಿದ್ರು. ನಾಳೆ ಬಿಜೆಪಿ ಮಹಿಳಾ ಮೋರ್ಚಾದಿಂದ ಸಿಎಂ ಮನೆಗೆ ಮುತ್ತಿಗೆ ಹಾಕುವುದಾಗಿ ಹೇಳಿದ್ರು. ಅಷ್ಟೇ ಅಲ್ಲ ಡೆತ್ ನೋಟ್ ಬಗ್ಗೆ ಸಮಗ್ರ ತನಿಖೆಯಾಗಬೇಕು. ಯಾರು ಡೆತ್ ನೋಟ್ ಬರೆಸಿದ್ದಾರೆ ಎಂಬ ಬಗ್ಗೆ ಉತ್ತರ ಸಿಗಬೇಕಿದೆ ಎಂದ್ರು.
Posted on: Tue, 04 Nov 2014 18:01:54 +0000

Trending Topics



Recently Viewed Topics




© 2015